

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೂರು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಚುನಾವಣೆಯು ಸೆ. 8ರಂದು ಬೆಳಗ್ಗೆ 9 ಗಂಟೆಯಿಂದ ಪಾಲಿಕೆ ಸಭಾಭವನದಲ್ಲಿ ನಡೆಯಲಿದೆ.
ಬೆಳಗ್ಗೆ 9 ರಿಂದ 10 ಗಂಟೆವರೆಗೆ ನಾಮಪತ್ರ ವಿತರಣೆ, 11 ಗಂಟೆವರೆಗೆ ನಾಮಪತ್ರ ಸ್ವೀಕಾರಿಸಲಾಗುವುದು. 11 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ನಂತರ ನಾಮಪತ್ರಗಳ ಪರಿಶೀಲನೆ, ನಾಮಪತ್ರಗಳನ್ನು ಹಿಂಪಡೆಯುವುದು, ಉಮೇದುವಾರರ ಪಟ್ಟಿ ಘೋಷಣೆ, ಅಗತ್ಯ ಇದ್ದಲ್ಲಿ ಮತದಾನ, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.