ಕಡಿಮೆ ಮತದಾನ ದಾಖಲಾದ ಮತಗಟ್ಟೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷ ಸಭೆ

PTR_7 APR_1
Published on

ಪುತ್ತೂರು ತಾಲೂಕಿನ ಕಡಿಮೆ ಮತದಾನ ದಾಖಲಾದ ಮತಗಟ್ಟೆ ಸಂಖ್ಯೆ 121 ಬಪ್ಪಳಿಗೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಸಲಾಯಿತು.


ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಬೂತ್ ವ್ಯಾಪ್ತಿಯ ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಸಮೀಪದ ಅಂಬಿಕಾ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಡೆಸಲು ಕಾರ್ಯಯೋಜನೆ ಕೈಗೊಳ್ಳಲಾಯಿತು. ಸರ್ಕಾರಿ ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯ ಹೆತ್ತವರು ಖಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ಶಾಲೆಯ ಶಿಕ್ಷಕರೊಂದಿಗೆ ಚರ್ಚಿಸಲಾಯಿತು.

ತಾಲೂಕು ಕಾರ್ಯನಿರ್ವಹಣಾಧಿಕಾರಿ ಹನಮ ರೆಡ್ಡಿ, ತಾ ಪಂ ಯೋಜನಾಧಿಕಾರಿ ಸುಕನ್ಯಾ, ಸೆಕ್ಟರ್ ಅಧಿಕಾರಿ ಎಲ್.ಸಿ.ಸಿಕ್ವೇರಾ, ಸ್ವೀಪ್ ತರಬೇತುದಾರರಾದ ನಂದಕಿಶೋರ್, ಭರತ್ ಕುಮಾರ್, ಎನ್ ಎಸ್ ಎಸ್ ಅಧಿಕಾರಿ ಹರ್ಷಿತ್, ಬೂತ್ ಮಟ್ಟದ ಅಧಿಕಾರಿಗಳಾದ ಚಂದ್ರಾವತಿ, ಸುಮಿತ್ರಾ, ಶಾಲಾ ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net