ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರ ಕಾರ್ಯಾಚರಣೆ; ಅರ್ಧ ಕೋಟಿ ಮೌಲ್ಯದ ವಸ್ತುಗಳು ಜಪ್ತಿ

23 smg 1
Published on

ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಜಿಲ್ಲಾ ಪೊಲೀಸರು, ಜಿಲ್ಲೆಯಾದ್ಯಂತ ನಾಖಾಬಂದಿ (ಚೆಕ್‌ಪೋಸ್ಟ್) ತೆರೆದು ವಾಹನಗಳ ತಪಾಸಣೆ ನಡೆಸುತ್ತಿದ್ದು ಒಂದೇ ದಿನ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 54.87 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಯುಗಾದಿ ಹಬ್ಬದ ದಿನ(ಮಾ.22)ದಂದೇ ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಲ್ಲೇ ಲಾರಿಯಲ್ಲಿ ಸಾಗಿಸುತ್ತಿದ್ದ 29.70 ಲಕ್ಷ ರೂ. ಮೌಲ್ಯದ 1100 ನಾನ್ ಸ್ಟಿಕ್ ದೋಸಾ ತವಾ, ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ 8 ಲಕ್ಷ ರೂ. ಮೌಲ್ಯದ 30 ಟನ್ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳಿದ್ದ 1 ಸಾವಿರ ಬ್ಯಾಗ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಅದೇ ದಿನ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂ. ಮೌಲ್ಯದ 10.504 ಟನ್ ಸಾಮರ್ಥ್ಯದ 404 ಅಕ್ಕಿ ಚೀಲ, ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ 10 ಲಕ್ಷ ರೂ. ಮೌಲ್ಯದ ಬಟ್ಟೆ, ಸೀರೆ, ಇಡ್ಲಿ ಕುಕ್ಕರ್‌ಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ 17,507 ರೂ. ಮೌಲ್ಯದ 25.608 ಲೀಟರ್ ಅಕ್ರಮ ಮದ್ಯ ಅಮಾನತ್ತುಪಡಿಸಿಕೊಂಡು ಆರೋಪಿತರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿ ಒಟ್ಟು 8 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net