ಬಿಜೆಪಿ ನಗರ ಮಂಡಲಕ್ಕೆ ಆಯ್ಕೆ

Election to BJP Nagar Mandal
Published on

ಮಡಿಕೇರಿ:

ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಮಂಡಲದ ಅಧ್ಯಕ್ಷರಾಗಿ ಉಮೇಶ್ ಸುಬ್ರಮಣಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳನ್ನಾಗಿ ಬಿ.ಕೆ.ಜಗದೀಶ್ ಹಾಗೂ ಪಿ.ಯು.ಕವನ್ ಕಾವೇರಪ್ಪ ಅವರನ್ನು ನೂತನ ಅಧ್ಯಕ್ಷರು ನೇಮಕ ಮಾಡಿದ್ದಾರೆ.

ಜಿಲ್ಲಾಧ್ಯಕ್ಷರ ಅನುಮೋದನೆ ಮೇರೆಗೆ ಪಕ್ಷದ ಮುಂದಿನ ಸಂಘಟನ್ಮಾತಕ ಚಟುವಟಿಕೆಗಳನ್ನು ಚುರುಕುಗೊಳಿಸುವ ದೃಷ್ಟಿಯಿಂದ ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಉಮೇಶ್ ಸುಬ್ರಮಣಿ ತಿಳಿಸಿದ್ದಾರೆ.

ನಗರದಲ್ಲಿ ಬಿಜೆಪಿ ಬಲವನ್ನು ಮತ್ತ?್ಟು ಹೆಚ್ಚಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಅತ್ಯಧಿಕ ಮತಗಳನ್ನು ಗಳಿಸಿಕೊಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net