ವಾಹನ ಚಾಲಕರು, ಮೋಟಾರು ಕೆಲಸಗಾರರ ಸಂಘಕ್ಕೆ ಆಯ್ಕೆ

06SPT03-balakrisna
Published on

ಸೋಮವಾರಪೇಟೆ: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಮಣಿ ಕುಶಾಲಪ್ಪ ಆಯ್ಕೆಯಾಗಿದ್ದಾರೆ.

ಮಾನಸ ಸಭಾಂಗಣದಲ್ಲಿ ಈಚೆಗೆ ಸಂಘದ ಅಧ್ಯಕ್ಷ ಕೆ.ಜಿ. ಸುರೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ರಂಗಸ್ವಾಮಿ, ಖಜಾಂಚಿಯಾಗಿ ಡ್ಯಾನಿಯಲ್ ಡೋಮಿಕ್ ಮತ್ತು ಸಹ ಕಾರ್ಯದರ್ಶಿಯಾಗಿ ಎಂ.ಎಂ. ಕಿರಣ ಆಯ್ಕೆಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net