

ಧಾರವಾಡ: ಉತ್ತರ ಕನ್ನಡ, ಗದಗ, ಧಾರವಾಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣಾ ಪ್ರಕ್ರಿಯೆ ನಡೆದಿದೆ. ಧಾರವಾಡ ಉತ್ಪನ್ನ ಡೇರಿಯ ಮುಖ್ಯ ಕಚೇರಿಯ ಆವರಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು, ಜೂ. 14ರಿಂದ ನಾಮಪತ್ರ ಸಲ್ಲಿಕೆ ಆರಂಭಗೊAಡಿದೆ. 22ರ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. 23ರಂದು ನಾಮಪತ್ರಗಳ ಪರಿಶೀಲನೆ, 24ರಂದು ಮಧ್ಯಾಹ್ನ 3ರವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶ ನೀಡಲಾಗಿದೆ. ಅಂದು ಮಧ್ಯಾಹ್ನ 3 ಗಂಟೆಯ ನಂತರ ಉಮೇದುವಾರರ ಪಟ್ಟಿ ಪ್ರಕಟಣೆ, ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ನಡೆಯಲಿದೆ. 30ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ, ನಂತರ ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಣೆ ಮಾಡಲಾಗುವುದು ಎಂದು ಚುನಾವಣಾ ಅಧಿಕಾರಿ ಡಾ. ಸಂತೋಷಕುಮಾರ ಬಿರಾದಾರ ತಿಳಿಸಿದ್ದಾರೆ.