

ಶಿರಾಳಕೊಪ್ಪ: ಶಿರಾಳಕೊಪ್ಪ ಪಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನ.10ಕ್ಕೆ ನಿಗದಿಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಹಿನ್ನೆಲೆಯಲ್ಲಿ ಬಹುತೇಕ ಚುನಾಯಿತ ಪ್ರತಿನಿಧಿಗಳು ಗೌಪ್ಯ ಸ್ಥಳಕ್ಕೆ ತೆರಳಿದ್ದಾರೆ. ಚುನಾಯಿತ ಪ್ರತಿನಿಧಿಗಳನ್ನು ಸಂರ್ಪಸಲು ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲ ಸದಸ್ಯರ ಫೋನ್ ಸ್ವಿಚ್ಆಫ್ ಆಗಿದೆ.
17 ಸದಸ್ಯ ಬಲದ ಪಪಂ ಚುನಾವಣೆಯಲ್ಲಿ ಕಾಂಗ್ರೆಸ್ 7ಸ್ಥಾನ ಪಡೆದಿದ್ದು ಮೈತ್ರಿ ಪಕ್ಷ ಜೆಡಿಎಸ್ 3 ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಅಧಿಕಾರ ಗದ್ದುಗೆ ಏರಲು ಯಾವುದೇ ಸಮಸ್ಯೆ ಇಲ್ಲವಾಗಿತ್ತು. ಆದರೆ ಬದಲಾದ ಮೀಸಲಾತಿ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ನಡೆಯುವುದು ಸ್ಪಷ್ಟವಾಗಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಚುನಾಯಿತ ಪ್ರತಿನಿಧಿಗಳು ಯಾವ ಪಕ್ಷದ ಪರವಾಗಿ ವಾಲುತ್ತಾರೆ ಎಂಬá-ದೇ ಯಕ್ಷಪ್ರಶ್ನೆಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.
ಸಿಎಂ ಹಾಗೂ ಸಂಸದರ ತವರು ಕ್ಷೇತ್ರವಾಗಿರá-ವುದರಿಂದ ಶತಾಯಗತಾಯ ಅಧಿಕಾರ ಹಿಡಿಯಲೇಬೇಕು ಎಂಬ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾವು ಹೆಚ್ಚು ಸ್ಥಾನ ಪಡೆದಿರುವುದರಿಂದ ಬಿಜೆಪಿಗೆ ಯಾವುದೇ ಕಾರಣಕ್ಕೂ ಅಧಿಕಾರ ಹಿಡಿಯಲು ಬಿಡಬಾರದು ಎಂಬ ಪ್ರಯತ್ನ ಮುಂದá-ವರಿಸಿವೆ.