ಚುನಾವಣಾ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ

17-Jaggu3-Web
ಗೋಕಾಕ ಮತ್ತು ಮೂಡಲಗಿ ಕೇಂದ್ರಗಳಲ್ಲಿ ತರಬೇತಿ ನಿರತ ಮತಗಟ್ಟೆ ಅಧಿಕಾರಿಗಳನ್ನುದ್ದೇಶಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿದರು. ಎಸ್‌ಪಿ ಲಕ್ಷ್ಮಣ ನಿಂಬರಗಿ ಇತರ ಅಧಿಕಾರಿಗಳಿದ್ದರು.
Published on

ಬೆಳಗಾವಿ: ಗ್ರಾಪಂ ಚುನಾವಣೆಗೆ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಗೊಂದಲಕ್ಕೆ ಒಳಗಾಗದೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.

ಮೊದಲ ಹಂತದ ಗ್ರಾಪಂ ಚುನಾವಣೆ ನಡೆಯಲಿರುವ ವಿವಿಧ ತಾಲೂಕು ಕೇಂದ್ರಗಳಲ್ಲಿನ ತರಬೇತಿ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಗಳ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ಜರುಗುವಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಕಿತ್ತೂರು, ಬೈಲಹೊಂಗಲ, ಗೋಕಾಕ, ಮೂಡಲಗಿ ಚುನಾವಣಾ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ, ತರಬೇತಿ ನಿರತ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಇದೇ ವೇಳೆ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಿದ್ಧತೆ ಪರಿಶೀಲಿಸಿದರು. ಗೋಕಾಕ ಮತ್ತು ಮೂಡಲಗಿ ಕೇಂದ್ರಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು. ಉಳಿದ ಕಡೆಗಳಲ್ಲಿ ಬೈಲಹೊಂಗಲ ಉಪ ವಿಭಾಗಾಧಿಕಾರಿ ಹಾಗೂ ತಹಸೀಲ್ದಾರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net