

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ 23ನೇ ಅವಧಿಗೆ ವಿವಿಧ 4 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಯ ಚುನಾವಣೆ ಜುಲೈ 2ರಂದು ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜರುಗಲಿದೆ. ಅಂದು ಬೆಳಗ್ಗೆ 10ರಿಂದ 12 ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರ ಸ್ವೀಕೃತಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.