ಮತದಾನ ಬಹಿಷ್ಕರಿಸಲು ನಿರ್ಧಾರ

gpt- NEW
Published on

ಗುಂಡ್ಲುಪೇಟೆ : ಕೆರೆಗಳಿಗೆ ನದಿಗಳಿಗೆ ನೀರು ತುಂಬಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ಧ ಬೇಸತ್ತ ಕುಂದಕರೆ ಗ್ರಾಮದ ರೈತರು ಭಾನುವಾರ ಮತದಾನ ಬಹಿಷ್ಕಾರ ನಿರ್ಧಾರ ಕೈಗೊಂಡರು.
ರೈತ ಮುಖಂಡರಾದ ಸಂಪತ್ತು, ಚಂದ್ರಶೇಖರ್, ಅರಿಶಿನ ಬೆಳೆಗಾರರ ಒಕ್ಕೂಟದ ಮುಖಂಡ ನಾಗಾರ್ಜುನ ಕುಮಾರ್ ಸೇರಿದಂತೆ ಹಲವರು ಸಭೆ ನಡೆಸಿ ಸಾಮೂಹಿಕವಾಗಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡರು. ಈ ಬಾರಿ ಭೀಕರ ಬರಗಾಲ ಎದುರಾಗಿದೆ. ಜನ, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಫಲಕಾರಿಯಾಗಿಲ್ಲ. ಏಪ್ರಿಲ್ ಮುಗಿಯುತ್ತಾ ಬಂದರೂ, ತಾಲೂಕಿನ ಕೆರೆಗಳಿಗೆ ನೀರು ತುಂಬಿಸಿಲ್ಲ. ಕಲ್ಲುಕಟ್ಟೆ ಜಲಾಶಯದಿಂದ ಪಾದಯಾತ್ರೆ ಮಾಡಿ ತಹಸೀಲ್ದಾರ್‌ಗೆ ಮನವಿ ಮಾಡಿದ್ದರೂ ವಡ್ಡಗೆರೆ ಕೆರೆಗೆ ನೀರು ಹರಿಸಿಲ್ಲ. ಮೇವು ನೀಡಿಲ್ಲ. ಹಾಗಾಗಿ ಕೆರೆಗಳ ವ್ಯಾಪ್ತಿಯ ಗ್ರಾಮದ ಜನರು ಮತ ಹಾಕುವುದಿಲ್ಲ ಎಂದು ನಿರ್ಧರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net