ಮಂಜಗುಣಿಯಲ್ಲಿ ವಿದ್ಯುತ್ ಕಂಬ, ಟಿಸಿ ಸ್ಥಳಾಂತರ

MANAGUNI POLL
Published on

ಅಂಕೋಲಾ: ತಾಲೂಕಿನ ಮಂಜಗುಣಿಯಲ್ಲಿ ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಕಂಪನಿಯವರು ವಿದ್ಯುತ್ ಕಂಬಗಳನ್ನು ಅಳವಡಿಸಿದ್ದಾರೆ. ಶಾಸಕ ಸತೀಶ ಸೈಲ್ ಅವರು ಭಾನುವಾರ ಸ್ಥಳ ಪರಿಶೀಲನೆ ನಡೆಸಿದಾಗ ವಿದ್ಯುತ್ ಪರಿವರ್ತಕವನ್ನು ಇನ್ನೂ ಹಿಂದಕ್ಕೆ ಅಳವಡಿಸಿಸುವಂತೆ ಸ್ಥಳೀಯರು ಒತ್ತಾಯಿಸಿದ್ದರು.
ಶಾಸಕರ ಸೂಚನೆಯಂತೆ ಹೆಸ್ಕಾಂ ಎಇಇ ಪ್ರವೀಣ ನಾಯ್ಕ, ಹೆಸ್ಕಾಂ ಶಾಖಾಧಿಕಾರಿ ಅಧಿಕಾರಿ ರಾಘವೇಂದ್ರ ನಾಯ್ಕ ಹಾಗೂ ಸಿಬ್ಬಂದಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಬುಧವಾರ ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿದ್ಯುತ್ ಪರಿವರ್ತಕ ಹಾಗೂ ಕಂಬವನ್ನು ತೆಗೆದು ಹಿಂದಕ್ಕೆ ಅಳವಡಿಸಿದರು.
ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ ಪರಿಶೀಲಿಸಿದ್ದು, ಆದಷ್ಟು ಶೀಘ್ರ ಸೇತುವೆ ಕಾಮಗಾರಿ ಮುಕ್ತಾಯಗೊಂಡು ಸಾರ್ವಜನಿಕರಿಗೆ ಮುಕ್ತಗೊಳ್ಳಬೇಕು. ಇಲ್ಲದಿದ್ದರೆ ಪ್ರಯಾಣಿಕರು ಸುತ್ತೂ ಬಳಸಿ ಸಂಚರಿಸಬೇಕಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗುತ್ತಿಗೆ ಕಂಪನಿಯ ಮೇಲ್ವಿಚಾರಕ ಬೊಮ್ಮಯ್ಯ ನಾಯಕ ಅವರಿಗೆ ಸೂಚಿಸಿದರು.
ಕಂದಾಯ ನಿರೀಕ್ಷಕ ಮಂಜುನಾಥ ನಾಯ್ಕ, ಸ್ಥಳೀಯರಾದ ಅನಿಲ ಜೆ. ನಾಯ್ಕ, ಈಶ್ವರ ನಾಯ್ಕ, ರವಿ ನಾಯ್ಕ, ಪ್ರಶಾಂತ ನಾಯ್ಕ, ಗೋವಿಂದ ನಾಯ್ಕ, ಬೊಮ್ಮಯ್ಯ ನಾಯ್ಕ ಉಪಸ್ಥಿತರಿದ್ದರು.

ಐದು ವರ್ಷಗಳಿಂದ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಈವರೆಗೂ ಪೂರ್ಣಗೊಂಡಿಲ್ಲ. ಸರ್ವಿಸ್ ರಸ್ತೆ ಇಕ್ಕೆಲದಲ್ಲಿಯೂ ಆಗುವಂತೆ ನೋಡಿಕೊಳ್ಳಬೇಕು. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾಗೂ ಇತರ ಕಂಬಗಳನ್ನು ಸ್ಥಳಾಂತರಿಸಿದ್ದರಿಂದ ಅನುಕೂಲವಾಗಿದೆ./ ಶ್ರೀಪಾದ ಟಿ. ನಾಯ್ಕ, ಮಂಜಗುಣಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net