ಮೈಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೇಕರಿಯೊಂದರ ಎಲೆಕ್ಟ್ರಾನಿಕ್ ಉತ್ಪನ್ನಗಳು ಸೇರಿದಂತೆ ವಿವಿಧ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಹೂಟಗಳ್ಳಿಯಲ್ಲಿ ಕೀರ್ತಿ ಅವರಿಗೆ ಸೇರಿದ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ಬೇಕರಿಯಲ್ಲಿ ಭಾನುವಾರ ರಾತ್ರಿ ಎಲ್ಲರೂ ಕೆಲಸ ಮುಗಿಸಿಬೀಗ ಹಾಕಿ ಮನೆಗೆ ತೆರಳಿದ್ದರು. ಆದರೆ ತಡ ರಾತ್ರಿ ಬೇಕರಿಯಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ಬಾಳು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ, ಒಂದು ಗಂಟೆಗೂ ಹೆಚ್ಚು ಕಾಲ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದರು. ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.