

ಮಂಡ್ಯ: ತುಂಬಕೆರೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆ.8 ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆಬೂದನೂರು, ಹೊಸಬೂದನೂರು, ಈಚಗೆರೆ, ಹಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.