

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಆ.8ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿ.ಸಿ ಫಾರ್ಮ್, ಶಿವಳ್ಳಿ, ದುದ್ದ, ಬಿ.ಹಟ್ನ, ಬೇವುಕಲ್ಲು, ಹುಲಿಕೆರೆ, ಚಂದಗಾಲು, ಹುಲ್ಲೇನಹಳ್ಳಿ, ಹೊಳಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.