ತುರ್ತು ಕಾಮಗಾರಿ ಹಿನ್ನೆಲೆ: ಆ.12ರಂದು ಮಂಡ್ಯ ತಾಲೂಕಿನ ವಿವಿಧೆಡೆ ಕರೆಂಟ್ ಇರಲ್ಲ

s_636777717725693583_Power_Cut
Published on

ಮಂಡ್ಯ: ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆ.12 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗನಹಳ್ಳಿ, ಪುರ, ಲೋಕಸರ, ಹಲುವಾಡಿ, ಕಮ್ನಾಯಕನಹಳ್ಳಿ, ಟಿ.ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು, ಗೋಪನಹಳ್ಳಿ, ಯಡಗನಹಳ್ಳಿ, ಮಾದರಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net