ತ್ರೈಮಾಸಿಕ ಕಾರ್ಯನಿರ್ವಹಣೆ: ಜ.10ರಂದು ವಿವಿಧೆಡೆ ಕರೆಂಟ್ ಇರಲ್ಲ

Power Cut
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಜ.10ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಬಸರಾಳು ವಿದ್ಯುತ್ ವಿತರಣಾ ಕೇಂದ್ರದ ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net