

ಮೈಸೂರು: ರಾಜೀವನಗರದಲ್ಲಿ ಸೋಮವಾರ ಬೆಳಗ್ಗೆ ಮನೆ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದ ಎಲೆಕ್ಟ್ರಿಷಿಯನ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ನಿವಾಸಿ ಪ್ರದೀಪ್(28)ಮೃತರು. ಸ್ನೇಹಿತರ ಮನೆ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸಲು ಇವರು ವಿದ್ಯುತ್ ಕಂಬ ಏರಿದ್ದರು.
ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಬಿದ್ದರು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.