

ಬಂಟ್ವಾಳ: ಕರ್ತವ್ಯನಿರತನಾಗಿದ್ದ ಇಲೆಕ್ಟ್ರಿಷಿಯನ್ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಉರ್ಕುಂಜ ಎಂಬಲ್ಲಿ ನಡೆದಿದೆ.ಇಲ್ಲಿನ ನೆಕ್ಕಿಲಪಲ್ಕೆ ನಿವಾಸಿ ದೇವದಾಸ್(35) ಮೃತಪಟ್ಟ ವ್ಯಕ್ತಿ.
ಗುರುವಾರ ಸಂಜೆ ಉಳಿ ಗ್ರಾಮದ ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.