ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ

Karatagi Power Employee Union Protest
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರಟಗಿಯಲ್ಲಿ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
Published on

ಕಾರಟಗಿ: ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಯಾವುದೇ ಕಾರಣಕ್ಕೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಬಾರದು ಹಾಗೂ ಈ ಕ್ಷೇತ್ರದ ಖಾಸಗೀಕರಣ ಮಾಡಬಾರದು. ಕಾಯ್ದೆ ತಿದ್ದುಪಡಿಯಾದರೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಹೊಡೆತ ಬೀಳಲಿದೆ. ಕ್ಷೇತ್ರ ಸಂಪೂರ್ಣವಾಗಿ ಖಾಸಗೀಕರಣವಾದರೆ ರೈತರಿಗೆ ಹಾಗೂ ಸಾರ್ವಜನಿಕರಿಗೆ ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಯನ್ನು ಕೈಬಿಡಬೇಕು. ಜನಪರವಾಗಿರುವ ಕಾಯ್ದೆಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಎಇಇ ಅರುಣ್ ಕುಮಾರ್, ಸಂಘದ ತಾಲೂಕಾಧ್ಯಕ್ಷ ನರಸಪ್ಪ, ಕಾರ್ಯದರ್ಶಿ ಜಗದೀಶ, ಸಿಬ್ಬಂದಿ ಹಂಪಯ್ಯ, ನಾಗರಾಜ, ಪುರುಷೋತ್ತಮ್, ಪ್ರಸಾದ್, ಕೃಷ್ಣ, ನಾಗಪ್ಪ, ನರಸಿಂಗ್, ಮಣಿಯಪ್ಪ, ಗಂಗಾಧರ ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net