ವಿದ್ಯುತ್ ಗ್ರಾಹಕರ ಸಂವಾದ ಸಭೆ

meeting
Published on

ನರಗುಂದ: ಪಟ್ಟಣದ ಹೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ವಿದ್ಯುತ್​ಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಮೇ 17ರಂದು ಮಧ್ಯಾಹ್ನ 3 ರಿಂದ 5.30ರವರೆಗೆ ಗ್ರಾಹಕರ ಸಂವಾದ ಸಭೆ ಹಮ್ಮಿಕೊಳ್ಳಲಾಗಿದೆ.

ನರಗುಂದ ಉಪ-ವಿಭಾಗೀಯ ವ್ಯಾಪ್ತಿಗೆ ಒಳಪಡುವ ಗ್ರಾಹಕರು ವಿದ್ಯುತ್​ಗೆ ಸಂಬಂಧಿಸಿದ ತಮ್ಮ ಸಮಸ್ಯೆಗಳ ಕುರಿತು ರ್ಚಚಿಸಿ ಸಲಹೆ ನೀಡುವಂತೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಎಂ. ಖುದಾವಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net