

ಲಿಂಗಸುಗೂರು: ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಈಗಾಗಲೇ ನಿರ್ಧರಿಸಿದಂತೆ 132/11 ಕೆವಿ ವಿದ್ಯುತ್ ವಿತರಣಾ ಕೇಂದ್ರವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಎಸಿ ಬಸವಣೆಪ್ಪ ಕಲಶೆಟ್ಟಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಮನವಿ ಸಲ್ಲಿಸಿದರು.
ಗ್ರಾಮದ ಬಳಿಯ ಜಡೆಶಂಕರಲಿಂಗ ಏತನೀರಾವರಿ ಯೋಜನೆಯ ಕೃಷಿ ಪಂಪ್‌ಸೆಟ್‌ಗಳು, ಕುಡಿಯುವ ನೀರು ಹಾಗೂ ಮನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಜೆಸ್ಕಾಂ ಆನೆಹೊಸೂರು ಗ್ರಾಮದಲ್ಲಿ 132/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲು ನೀಲಿನಕ್ಷೆ ಸಿದ್ಧಪಡಿಸಿದೆ. ಆದರೆ ಇದೀಗ ಈ ಕೇಂದ್ರವನ್ನು ಜೆಸ್ಕಾಂ ಅಧಿಕಾರಿಗಳು ಚಿಕ್ಕಉಪ್ಪೇರಿಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಈ ಕುರಿತು ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.