ಮದ್ದೂರು ತಾಲೂಕಿನ ವಿವಿಧೆಡೆ ವಿದ್ಯುತ್ ಉಪಕೇಂದ್ರ ಸ್ಥಾಪನೆ: ಶಾಸಕ ಡಿ.ಸಿ.ತಮ್ಮಣ್ಣ ಹೇಳಿಕೆ

Maddur
Published on

ಮದ್ದೂರು: ಸೆಸ್ಕ್ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡುವ ಮೂಲಕ ರೈತರಿಗೆ ಮತ್ತು ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಶಾಸಕ ಡಿ ಸಿ ತಮ್ಮಣ್ಣ ಹೇಳಿದರು.
ಪಟ್ಟಣದ ಶಿವಪುರದ ಧ್ವಜಸತ್ಯಾಗ್ರಹ ಸೌಧದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಡೆದ ‘ಉಜ್ವಲ ಭಾರತ- ಉಜ್ವಲ ಭವಿಷ್ಯ’ ವಿದ್ಯುತ್ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ರೈತರು ಸಮಸ್ಯೆಗಳನ್ನು ಸಕಾಲದಲ್ಲಿ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ಕಾಡುಕೊತ್ತನಹಳ್ಳಿ, ಕೆ.ಎಂ.ದೊಡ್ಡಿ, ಮದ್ದೂರು, ಕೆ.ಹೊನ್ನಲಗೆರೆ, ಬೆಸಗರಹಳ್ಳಿ, ದುಂಡನಹಳ್ಳಿ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಮಾಡಲಾಗುತ್ತಿದೆ. ಹಲವು ಉಪ ಕೇಂದ್ರಗಳನ್ನು ಉನ್ನತೀಕರಿಸಲಾಗಿದೆ. ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ 220 ಕೆ.ವಿ. ಉಪ ಕೇಂದ್ರ ತೆರೆಯಲು ಟೆಂಡರ್ ಕರೆಯಲಾಗಿದೆ. ಗೆಜ್ಜಲಗೆರೆ ಕೈಗಾರಿಕಾ ಪ್ರದೇಶ ಮತ್ತು ತೊರೆಬೊಮ್ಮನಹಳ್ಳಿಯಲ್ಲೂ ಉಪ ಕೇಂದ್ರ ತೆರೆಯವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಸಿಗಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net