ಕಂಬದಲ್ಲಿ ಕೆಲಸ ಮಾಡುತ್ತಿದ್ದ ಲೈನಮನ್‌ಗೆ ವಿದ್ಯುತ್ ಸ್ಪರ್ಶಿಸಿ ಸಾವು

6-RNR-06 chanabayya gattimath...
Published on

ರಾಣೆಬೆನ್ನೂರ: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಲೈನಮನ್‌ಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ತಾಲೂಕಿನ ಹರನಗಿರಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
ಹಾವೇರಿ ತಾಲೂಕಿನ ಗುತ್ತಲ ಗ್ರಾಮದ ಚನ್ನಬಸಯ್ಯ ಗಟ್ಟಿಮಠ (36) ಮೃತ ಲೈನಮನ್.
ಈತ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಏಕಾಏಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net