ಬ್ಯಾಡಗಿ: ಜಮೀನಿನಲ್ಲಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹಳೇ ಗುಂಗರಗೊಪ್ಪ ಗ್ರಾಮದಲ್ಲಿ ಭಾನುವಾರ ನಡೆದಿದೆ..ವಿನಾಯಕ ಹನುಮಂತಪ್ಪ ಇಮ್ಮಡಿ (17) ಮೃತ ಯುವಕ..ಈತ ಜಮೀನಿನಲ್ಲಿ ಬೋರ್ವೆಲ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.