ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಆತ್ಮಹತ್ಯೆ

Death 28 June 20
Published on

ತೆಲಸಂಗ: ಗ್ರಾಮದ ರೈತನೋರ್ವ ಸಾಲಬಾಧೆ ತಾಳಲಾರದೆ ಭಾನುವಾರ ವಿದ್ಯುತ್ ತಂತಿ ಸ್ಪರ್ಶಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ರಾಮ ಭೀಮು ದೇವಕತೆ (37)ಆತ್ಮಹತ್ಯೆ ಮಾಡಿಕೊಂಡ ರೈತ. ದ್ರಾಕ್ಷಿ ಬೆಳೆಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ರೈತನಿಗೆ ಮೂರು ವರ್ಷಗಳಿಂದ ಸಾಲದ ಹೊರೆ ಹೆಚ್ಚಾಗಿತ್ತು.

ಆ ವಿಷಯವಾಗಿ ಮನೆಯವರೊಂದಿಗೆ ಜಗಳ ಮಾಡಿ ಜಮೀನಿನ ಕೃಷಿ ಹೊಂಡದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈತನ ಪತ್ನಿ ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ರೈತನಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net