

ಗುಂಡ್ಲುಪೇಟೆ : ಜಮೀನಿನಲ್ಲಿ ಮಲಗಿದ್ದ ರೈತನನ್ನು ಕಾಡಾನೆ ತುಳಿದು ಗಾಯಗೊಳಿಸಿದ ಘಟನೆ ತಾಲೂಕಿನ ದೇಶೀಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜಶೆಟ್ಟಿ (48) ಎಂಬಾತ ಜಮೀನಿನಲ್ಲಿ ಮಲಗಿದ್ದಾಗ ಶುಕ್ರವಾರ ನಸುಕಿನಲ್ಲಿ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಇವರ ಮೊಣಕೈ ಮೇಲೆ ಕಾಲಿಟ್ಟಿದ್ದರಿಂದ ಮೂಳೆ ಜಖಂ ಆಗಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದರು.ಗುಂಡ್ಲುಪೇಟೆ ಉಪವಿಭಾಗದ ಎಸಿಎಫ್ ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿ ಕುಶಲ ವಿಚಾರಿಸಿದರು.