ಆನೆ ಕಾಡಿಗಟ್ಟುವ ಕಾರ್ಯಾಚರಣೆಗೆ ಅಡ್ಡಿ

ಆನೆ ಕಾಡಿಗಟ್ಟುವ ಕಾರ್ಯಾಚರಣೆಗೆ ಅಡ್ಡಿ
Published on

ಗುಂಡ್ಲುಪೇಟೆ: ಆನೆ ಕಾಡಿಗಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅರಣ್ಯ ಸಿಬ್ಬಂದಿ ತಮ್ಮ ಕೆಲಸಕ್ಕೆ ಅಡ್ಡಿಮಾಡುತ್ತಿದ್ದ ವ್ಯಕ್ತಿಯಿಂದ ಪಾರಾಗಲು ಪೊಲೀಸರ ಮೊರೆಹೋದ ಘಟನೆ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದ ಉಪವಲಯಾರಣ್ಯಾಧಿಕಾರಿ ಶಶಿಧರ ಮತ್ತು ಸಿಬ್ಬಂದಿ ಕಾಡಂಚಿನ ಜಮೀನುಗಳಿಗೆ ಬಂದಿದ್ದ ಆನೆಗಳನ್ನು ಓಡಿಸುವಾಗ ಶ್ರೀಕಂಠಪುರ ಗ್ರಾಮದ ರಾಚಯ್ಯ ಎಂಬಾತ ಕುಡಿದ ಮತ್ತಿನಲ್ಲಿ ಸಿಬ್ಬಂದಿಗಳ ಮೇಲೆ ಗಲಾಟೆಗೆ ಮುಂದಾಗಿದ್ದಾನೆ.

ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ಹೊಯ್ಸಳ ಪೊಲೀಸರಿಗೆ ಕರೆಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ರಾಚಯ್ಯನಿಗೆ ಸೂಕ್ತ ತಿಳುವಳಿಕೆ ನೀಡಿ ಗ್ರಾಮಕ್ಕೆ ಕರೆತಂದು ಬಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net