ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಾಳೆ

Published on

ಸಿದ್ದಾಪುರ: ವಿರಾಜಪೇಟೆ ಮತ್ತು ತಿತಿಮತಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಕಳತ್ಮಾಡು, ಕೈಕೇರಿ, ಹೊಸಕೋಟೆ, ನಲ್ವತೋಕ್ಲು, ಕೆ.ಬೈಗೋಡು, ಹೊಸೂರು, ಹಾತೂರು, ಪುಲಿಯೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಆನೆಗಳನ್ನು ಕಾಡಿಗೆ ಓಡಿಸುವ ಜಂಟಿ ಕಾರ್ಯಾಚರಣೆಯನ್ನು ನ.7ರಂದು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆಯಿಂದ ಸಂಜೆವರೆಗೆ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು, ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಮುನ್ನೆಚ್ಚರಿಕೆಯಿಂದ ಇರಬೇಕು. ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಕಂಡುಬಂದರೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ವಿರಾಜಪೇಟೆ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೊಚ್ಚೆರ ನೆಹರೂ ಹಾಗೂ ತಿತಿಮತಿ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ.ಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net