ಆನೆ ಕಾಡಿಗಟ್ಟುವ ಕಾರ್ಯಾಚರಣೆ ಯಶಸ್ವಿ

Oplus_16908288
ಕಾಡಾನೆಗಳ ಹಿಂಡು
Published on

ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಮಾರ್ಗೋಳ್ಳಿ ಎಸ್ಟೇಟ್ ಮತ್ತು ಮೈಲಾಪುರ ಎಸ್ಟೇಟ್ ಒಳಗೆ ಇದ್ದ ಸುಮಾರು 4 ಮರಿ ಸೇರಿದಂತೆ 18 ಕಾಡಾನೆಗಳನ್ನು ಸೋಮವಾರ ಕಾರ್ಯಾಚರಣೆ ನಡೆಸಿ ಮಾಲ್ದಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಯಿತು.

ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆ ಹಾಗೂ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಗನ್ನಾಥ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ.ಗೋಪಾಲ್ ನಿರ್ದೇಶನದ ಮೇರೆಗೆ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ಚೆನ್ನಂಗಿ ಶಾಖೆಯ ಉಪ ವಲಯ ಅರಣ್ಯ ಅಧಿಕಾರಿ ಪಿ.ಟಿ.ಶಶಿ ಮತ್ತು ತಂಡದವರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ಗಸ್ತು ಅರಣ್ಯ ಪಾಲಕ ಆರ್. ರಾಜೇಶ್ ತಂಡದ ರಂಜಿತ್, ಶಂಕರ್, ಪ್ರದೀಪ, ರೋಷನ್, ಸುಂದರ, ಧನು, ಪ್ರವೀಣ, ಪ್ರಜ್ವಲ್ ಮತ್ತು ಅರುಣ ಹಾಗೂ ವನ್ಯಜೀವಿ ವಲಯದ ಸಿಬ್ಬಂದಿ ಶಿವು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net