ಹೆಚ್ಚಾದ ತಾಪಮಾನ: ಅಗತ್ಯ ಕ್ರಮ ವಹಿಸಲು ಸೂಚನೆ

dho
Published on

ಮಡಿಕೇರಿ: ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದ್ದು, ಜಿಲ್ಲೆಯ ಜನತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಭಾರತೀಯ ಹವಾಮಾನ ಇಲಾಖೆಯು ಬಿಸಿಲು, ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಜಿಲ್ಲೆಯಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‌ವೇವ್(ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಲಹೆ ನೀಡಿದೆ ಎಂದು ತಿಳಿಸಿದ್ದಾರೆ.


ಸೂಚನೆಗಳು: ಸಾಧ್ಯವಾದಷ್ಟು ಮಟ್ಟಿಗೆ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದು ತಪ್ಪಿಸಬೇಕು. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್‌ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಎಂದು ಸಲಹೆ ನೀಡಿದ್ದಾರೆ.


ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net