ಕಾಲ್ತುಳಿತದಿಂದ ಹನ್ನೊಂದು ಮಂದಿ ಅಭಿಮಾನಿಗಳ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ RCB

RCB
Published on

RCB: ಆರ್​​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟ 11 ಅಭಿಮಾನಿಗಳ ಕುಟುಂಬಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 10 ಲಕ್ಷ ರೂ. ಪರಿಹಾರವನ್ನು ಗುರುವಾರ (ಜೂನ್​.5) ಫೋಷಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗಾಗಿ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಪಾರ ಅಭಿಮಾನಿ ಸಾಗರವೇ ಹರಿದು ಬಂದಿತ್ತು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಕ್ಕಾಗಿ ಕ್ರೀಡಾಂಗಣದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ ಹನ್ನೊಂದು ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

ಈ ಘಟನೆಯ ನಂತರ, ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ RCB ತಂಡವು ಸಹಾಯವನ್ನು ಘೋಷಿಸಿದ್ದಲ್ಲದೆ, ಕಾಲ್ತುಳಿತದ ಸಮಯದಲ್ಲಿ ಗಾಯಗೊಂಡ ಎಲ್ಲರ ಚಿಕಿತ್ಸೆಗಾಗಿ ಆರ್‌ಸಿಬಿ ಕೇರ್ಸ್ ನಿಧಿಯನ್ನು ಸ್ಥಾಪಿಸಲು ನಿರ್ಧರಿಸಿದೆ.

"ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆ ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ. ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. "ನಾವು ಮಾಡುವ ಪ್ರತಿಯೊಂದರಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ಹೃದಯದಲ್ಲಿ ಉಳಿಯುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ" ಎಂದು RCB ತನ್ನ X ನಲ್ಲಿ ಪೋಸ್ಟ್​​​ ಮಾಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net