

ಉಡುಪಿ: ಉತ್ಪಾದನಾ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಉದ್ಯೋಗ ಸಂಬಂಧಿತ ಪ್ರೋತ್ಸಾಹ ಧನ (ಇಎಲ್ಐ) ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಆ.1ರಿಂದ ಜಾರಿಗೆ ಬರಲಿದೆ.ಯೋಜನೆ ಮೂಲಕ ಜಿಲ್ಲೆಯಲ್ಲಿ 20 ರಿಂದ 25 ಸಾವಿರ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಇಪಿಎ್ಐ ವಲಯ ಆಯುಕ್ತ ಶಶಿಕಾಂತ್ ದಹಿಯಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಿಗಳು ಒಂದು ತಿಂಗಳ ವೇತನ (15,000 ರೂ.ವರೆಗೆ) ಸರ್ಕಾರ 2 ಕಂತಿನ ಮೂಲಕ 2 ವರ್ಷ ಪಾವತಿ ಮಾಡಲಿದೆ. ಹೆಚ್ಚುವರಿ ಉದ್ಯೋಗ ಸೃಷ್ಟಿಸಲು ಉದ್ಯೋಗದಾತರಿಗೆ ಎರಡು ವರ್ಷಗಳವರೆಗೆ ಪ್ರತಿ ತಿಂಗಳು 3 ಸಾವಿರ ರೂ.ವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉತ್ಪಾದನಾ ವಲಯಕ್ಕೆ 4 ವರ್ಷಗಳವರೆಗೆ ಯೋಜನೆ ಪ್ರಯೋಜನ ಸಿಗಲಿದೆ. ಈ ಯೋಜನೆಯ ಪ್ರಯೋಜನಗಳುಆಗಸ್ಟ್ ರಿಂದ ಜುಲೈ 31, 2027ರ ನಡುವೆಸೃಷ್ಟಿಯಾದಉದ್ಯೋಗಗಳಿಗೆ ಅನ್ವಯವಾಗುತ್ತವೆ ಎಂದರು.
ಪರಿವರ್ತನಾಧಿಕಾರಿ ಸುನೀಲ್ ರಾವ್ ಮಾತನಾಡಿ, ಇಪಿಎಫ್ಒದಲ್ಲಿ ನೋಂದಾಯಿಸಲ್ಪಟ್ಟ 50 ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳು ಕನಿಷ್ಠ ಇಬ್ಬರು ಹೆಚ್ಚುವರಿ ಉದ್ಯೋಗಿಗಳನ್ನು ಹಾಗೂ 50ಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳು ಕನಿಷ್ಠ 5 ಮಂದಿಯನ್ನು ನೇಮಿಸಿಕೊಳ್ಳಬೇಕಾಗುತ್ತದೆ.ಮೊದಲ ಬಾರಿಯ ಉದ್ಯೋಗಿಗಳಿಗೆ ಎಲ್ಲಾ ಪಾವತಿಗಳನ್ನು ಆಧಾರ್ ಬ್ರಿಡ್ಜ್ ಪಾವತಿ ವ್ಯವಸ್ಥೆ (ಎಬಿಪಿಎಸ್) ಬಳಸಿಕೊಂಡು ಡಿಬಿಟಿ (ನೇರ ಪ್ರಯೋಜನ ವರ್ಗಾವಣೆ) ಮೂಲಕ ಸಹಾಯಧನ ಪಾವತಿಸಲಾಗುತ್ತದೆ. ಉದ್ಯೋಗದಾತರಿಗೆ ನೇರವಾಗಿ ಪ್ಯಾನ್-ಲಿಂಕ್ಡ್ ಖಾತೆಗಳಿಗೆ ಹಣ ಜಮೆಯಾಗಲಿದೆ. ಜಿಲ್ಲೆಯಲ್ಲಿ 3,400 ಕೈಗಾರಿಕಾ ಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, 1.03 ಲಕ್ಷ ಉಡ್ಯೋಗಿಗಳು ಇಪಿಎ್ ಯೋಜನೆಯಡಿ ನೋಂದಾಯಿಸಲ್ಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಲೇಖಾಧಿಕಾರಿ ರಾಜೀವ್ ರ, ಲೆಕ್ಕಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು.