ಅರ್ಹ ಬಿಪಿಎಲ್ ಕಾರ್ಡ್‌ ರದ್ದು ಮಾಡಲ್ಲ, ಮುನಿಯಪ್ಪ ಸ್ಪಷ್ಟನೆ

food minister k.h.muniyappa
Published on

ಶಿವಮೊಗ್ಗ: ರಾಜ್ಯದಲ್ಲಿ ಯಾವುದೇ ಅರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹಗೊಳಿಸಿ ಅವರಿಗೆ ಎಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದರು.

ಒಟ್ಟು ರಾಜ್ಯದಲ್ಲಿ ಕೇಂದ್ರ ಸರ್ಕಾರದ ನಿಯಮವಳಿಗಳಂತೆ ಶೇ.15ರಷ್ಟು ಬಿಪಿಎಲ್ ಕಾರ್ಡ್‌ಗಳು ಅನರ್ಹಗೊಂಡಿವೆ. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರವೇ ಬಿಪಿಎಲ್ ಕಾಡುಗಳು ರದ್ದಾಗಿದೆ. ಆದರೆ ಅರ್ಹರು ಆತಂಕ ಪಡುವುದು ಬೇಡ ಎಂದ ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಇಬ್ಬರೂ ಸೇರಿ ಸೆಪ್ಟೆಂಬರ್ ತಿಂಗಳವರೆಗಿನ ಕಮಿಷನ್ ಕೊಡಲು ತೀರ್ಮಾನವಾಗಿದ್ದು, ಈ ವಾರದೊಳಗೆ ಎಲ್ಲ ಪಡಿತರ ವಿತರಕರಿಗೆ ಕಮಿಷನ್ ನೀಡಲಿದ್ದೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. ಕೇಂದ್ರ ಸರ್ಕಾರದಿಂದ ಕಮಿಷನ್ ಬರಲು ತಡವಾಯಿತು. ಆ ಕಾರಣಕ್ಕೆ ಪಡಿತರ ವಿತರಕರಿಗೆ ಕಮಿಷನ್ ನೀಡಲು ಸಾಧ್ಯವಾಗಿರಲಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net