ಅರ್ಹ ಶಿಕ್ಷಕರು ಮತಹಕ್ಕು ಪಡೆಯಿರಿ

CLK ELECTION 06
Published on

ಚಳ್ಳಕೆರೆ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹತೆ ಇರುವ ಶಿಕ್ಷಕರು ಚುನಾವಣಾ ಆಯೋಗದ ಅರ್ಜಿ ನಮೂನೆಯಲ್ಲಿ ಮಾಹಿತಿ ನೀಡುವ ಮೂಲಕ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ರೇಹಾನ್ ಪಾಷಾ ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರೌಢಶಾಲೆ ಮುಖ್ಯ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಮಾತನಾಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮತದಾರರಾಗಿ 802 ಶಿಕ್ಷಕರ ನೋಂದಣಿ ಇದೆ. ಅರ್ಹತೆ ಪಡೆದುಕೊಂಡಿರುವ ಶಿಕ್ಷಕರು ಮತದಾನ ಪಟ್ಟಿಗೆ ಹೇಸರು ಸೇರ್ಪಡೆ ಮಾಡಲು ಮುಂದಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಪಾಲಯ್ಯ, ಅನುದಾನಿತ ಪ್ರೌಢಶಾಲಾ ಸಂಘದ ಜಿ.ಟಿ.ವೀರಭದ್ರನಾಯಕ, ಸಿಇಒ ಗಿರೀಶ್‌ಬಾಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net