ದೇಶದ ಪ್ರಗತಿಗಾಗಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿ

30 Dwd 5
Published on

ಧಾರವಾಡ: ದೇಶದ ಸರ್ವತೋಮುಖ ಅಭಿವೃದ್ಧಿಗೆ ಭ್ರಷ್ಟಾಚಾರ ಎಂಬ ಪಿಡುಗು ನಿರ್ಮೂಲನೆ ಮಾಡಬೇಕು. ಸರ್ಕಾರಿ ನೌಕರರು ಭ್ರಷ್ಟಾಚಾರ ರಹಿತ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶೆ ಕೆ.ಜಿ. ಶಾಂತಿ ಹೇಳಿದರು.
ನರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಾಸಿಗೆ ಇದ್ದಷ್ಟು ಕಾಲು ಚಾಚು ಎಂಬ ಗಾದೆ ಮಾತಿನ ಹಾಗೆ ಸರ್ಕಾರಿ ನೌಕರರು ತಮ್ಮ ವೇತನದಲ್ಲಿ ಉತ್ತಮ ಜೀವನ ನಿರ್ವಹಿಸಬೇಕು. ಭ್ರಷ್ಟಾಚಾರ ನಿರ್ಮೂಲನೆಯಂಥ ಕಾನೂನು ಅರಿವು ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು ಎಂದರು.
ಜಿಲ್ಲಾಽಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಇತರರಿದ್ದರು.
ಲೋಕಾಯುಕ್ತ ಪೊಲೀಸ್ ಅಽÃಕ್ಷಕ ಸತೀಶ ಚಿಟಗುಬ್ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ಯಾನೆಲ್ ವಕೀಲ ಸೋಮಶೇಖರ ಜಾಡರ ನಿರೂಪಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಽÃಶ ಪರಶುರಾಮ ಎಫ್. ದೊಡ್ಡಮನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net