ಒಂಟಿಸಲಗ ದಾಳಿಗೆ ತಂದೆ ಬಲಿ, ಮಗ ಗಂಭೀರ

Published on

ಉಪ್ಪಿನಂಗಡಿ: ಶಿರಾಡಿ ಬಳಿ ಶನಿವಾರ ಸಾಯಂಕಾಲ ಗುಂಡ್ಯ ಹೊಳೆಗೆ ಮೀನು ಹಿಡಿಯಲೆಂದು ಹೋದ ಇಬ್ಬರ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ಘಟನೆಯಲ್ಲಿ ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿ ತಿಮ್ಮಪ್ಪ(45) ಎಂಬುವರು ಮೃತಪಟ್ಟಿದ್ದಾರೆ. ಅವರ ಪುತ್ರ ಶರಣ್(18) ಗಂಭೀರ ಗಾಯಗೊಂಡಿದ್ದಾರೆ.

ಮೀನು ಹಿಡಿಯಲೆಂದು ಇಬ್ಬರೂ ಶಿರಾಡಿ ಗ್ರಾಮದ ಗುಂಡ್ಯ ಹೊಳೆ ಬದಿಗೆ ಹೋಗಿದ್ದ ವೇಳೆ ಕಾಡಿನಿಂದ ಹೊಳೆಯತ್ತ ಆಗಮಿಸಿದ್ದ ಒಂಟಿಸಲಗ ಶರಣ್ ಮೇಲೆ ದಾಳಿ ಮಾಡಿದೆ. ರಕ್ಷಣೆಗೆ ಮುಂದಾದ ತಿಮ್ಮಪ್ಪ ಅವರನ್ನು ಕೆಡವಿ ಕಾಲಿನಿಂದ ಹೊಸಕಿದೆ. ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶರಣ್ ಪ್ರಾಣಾಪಾಯದಿಂದ ಪಾರಾಗಿದ್ದು, ನೆಲ್ಯಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಮತ್ತವರ ತಂಡ ಭೇಟಿ ನೀಡಿದ್ದು, ಗಾಯಾಳುವಿನ ಚಿಕಿತ್ಸೆಗೆ ಸಂಬಂಧಿಸಿ ಇಲಾಖಾ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net