ಗಾಂಧೀಜಿ ತತ್ವಾದರ್ಶ ಮೈಗೂಡಿಸಿಕೊಳ್ಳಿ

2 ckm 2
ಚಿಕ್ಕಮಳೂರಿನ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು. ಎಚ್.ಡಿ.ತಮ್ಮಯ್ಯ, ಡಾ.ಅಂಶುಮAತ್, ರೇಖಾ ಹುಲಿಯಪ್ಪ ಗೌಡ, ಡಾ. ಡಿ.ಎಲ್.ವಿಜಯಕುಮಾರ್, ಎಚ್.ಪಿ.ಮಂಜೇಗೌಡ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಪ್ರಸ್ತುತ ಸಮಾಜದಲ್ಲಿ ಯುವಕರು ರಾಷ್ಟçಪಿತಾ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್‌ನಿAದ ಬುಧವಾರ ಗಾಂಧಿ ಜಯಂತಿ ಆಂಗವಾಗಿ ಆಯೋಜಿಸಲಾಗಿದ್ದ ೧ ಕಿ.ಮೀ. ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಸ್ವಾತಂತ್ರö್ಯ ಹೋರಾಟಕ್ಕೆ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಪರಿಣಾಮ ಇಂದು ಭಾರತೀಯರಾದ ನಾವುಗಳೆಲ್ಲರು ಸ್ವಾತಂತ್ರö್ಯವನ್ನು ಅನುಭವಹಿಸಲು ಸಾದ್ಯವಾಗಿದೆ ಎಂದು ವಿಶ್ಲೇಷಿಸಿದರು.
ಸತ್ಯ, ಅಹಿಂಸೆ, ತ್ಯಾಗ ಈ ಮೂರರ ಮೂಲಕ ಸ್ವಾತಂತ್ರö್ಯ ಹೋರಾಟ ಮಾಡಿದವರು ಮಹಾತ್ಮ ಗಾಂಧೀಜಿ. ೧೯೨೪ ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನವನ್ನು ಬೆಳಗಾವಿ ನಗರದಲ್ಲಿ ನೆಡೆದಿದ್ದು, ೧೦೦ ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ ಶತಮಾನೋತ್ಸವದ ಸವಿ ನೆನಪಿಗಾಗಿ ವರ್ಷವಿಡೀ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳು ಮತ್ತು ವಿಚಾರ ಧಾರೆಗಳನ್ನು ಜನರಿಗೆ ಮನ ಮುಟ್ಟುವಂತೆ ಕೆಪಿಸಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಬಡವರಿಗಾಗಿ ಉಳ್ಳವರು ಸೋಮವಾರ ಒಂದು ದಿನ ಉಪವಾಸ ಮಾಡಬೇಕೆಂದು ಮಹಾತ್ಮ ಗಾಂಧೀಜಿ ಕರೆ ನೀಡಿದ್ದನ್ನು ಸ್ಮರಿಸಿದ ತಮ್ಮಯ್ಯ, ಇದನ್ನು ದೇಶದ ಜನತೆ ಗೌರವಿಸಿ ಉಪವಾಸ ಮಾಡುವ ಮೂಲಕ ಬಡವರಿಗೆ ನೆರವಾದರು ಎಂದು ಹೇಳಿದರು.
ಶೇ. ೭೦ರಷ್ಟು ರೈತರು ಇರುವ ಭಾರತ ದೇಶದಲ್ಲಿ ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತಿç. ದೇಶದ ರೈತರಿಗೆ ಬೆನ್ನುಲುಬಾಗಿ ಕೆಲಸ ಮಾಡಿದ್ದಾರೆ. ಇಂದು ರೈತರು ಆರ್ಥಿಕವಾಗಿ ಒಂದಿಷ್ಟು ಸಬಲರಾದಲು ಶಾಸ್ತಿç ಅವರು ಕಾರಣ ಎಂದರು.
ಶೌಚಗೃಹ ಸ್ವಚ್ಚವಾಗಿದ್ದರೆ ಆ ಕುಟುಂಬದ ಮನೆ ಸ್ವಚ್ಚವಾಗಿರುತ್ತದೆ ಎಂದು ಭಾವಿಸಿದ್ದ ಮಹಾತ್ಮ ಗಾಂಧೀಜಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂದೇ ಸ್ವಚ್ಚತೆಗೆ ಆದ್ಯತೆ ನೀಡಿದ್ದರು ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮAತ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಇಡೀ ರಾಜ್ಯಾದ್ಯಂತ ತಲುಪಿಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ಕೆಪಿಸಿಸಿ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ವರ್ಷವಿಡೀ ಶತಮಾನೋತ್ಸವ ಆಚರಣೆಗೆ ಸಿದ್ಧತೆ ನೆಡೆಯುತ್ತಿದ್ದು, ಸಾಂಕೇತಿಕವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾಹುಲಿಯಪ್ಪಗೌಡ ಮಾತನಾಡಿ, ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಅಹಿಂಸೆ ಮೂಲಕ ಸ್ವಾತಂತ್ರö್ಯ ಗಳಿಸಿದ ದೇಶ ಭಾರತ ವಿಶ್ವದಲ್ಲೇ ಮಾದರಿಯಾಗಿದೆ. ಮಹಾತ್ಮ ಗಾಂಧಿಜಿ ತತ್ವ ಮತ್ತು ಸಂದೇಶಗಳನ್ನು ಯುವಕರು ಅಳವಡಿಸಿಕೊಂಡು ಸಾರ್ಥಕತೆ ಪಡೆಯುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಡಿ.ಎಲ್ ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಪ್ರಮುಖರಾದ ಎಂ.ಎಲ್.ಮೂರ್ತಿ, ಮಲ್ಲೇಶ್ ಸ್ವಾಮಿ, ತನೋಜ್ ಕುಮಾರ್ ನಾಯ್ಡು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net