

ಹಳಿಯಾಳ: ತಾಂತ್ರಿಕ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೆಸ್ಕಾಂ ಆಡಳಿತ ವಿಭಾಗದ ಪ್ರಧಾನ ವ್ಯವಸ್ಥಾಪಕ ಡಾ. ಸಿದ್ದು ಹುಲ್ಲಳ್ಳಿ ಸಲಹೆ ನೀಡಿದರು.
ಪಟ್ಟಣದ ಕೆಎಲ್ಎಸ್ ವಿಡಿಐಟಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಇಂಜಿನಿಯರ್ಸ್ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಹೆತ್ತವರನ್ನು ಮರೆಯದೆ ಅವರ ತ್ಯಾಗವನ್ನು ಸದಾ ನೆನಪಿನಲ್ಲಿಡಬೇಕು ಎಂದು ಕಿವಿಮಾತು ಹೇಳಿದರು.
ಧಾರವಾಡದ ಐಐಐಟಿಯ ಡಾ. ಮಂಜುನಾಥ, ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ವಿ. ಎ. ಕುಲಕರ್ಣಿ ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ 305 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಪದವಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಪ್ರೊ. ಅಲ್ಲಮ ಪ್ರಭು ಕೊಳಕಿ, ಪ್ರೊ. ಪ್ಲಾಸಿನ್ ಡೈಯಾಸ್, ಡಾ ಮಹೇಂದ್ರ ದೀಕ್ಷಿತ್ ಇದ್ದರು.