ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ

10 vikram 7
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕಿಟೆಲ್​ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಪರಿಷತ್​ನ ಪ್ರಮಾಣ ವಚನ ಸಮಾರಂಭ ಶನಿವಾರ ಜರುಗಿತು.
ಕರ್ನಾಟಕ ಉತ್ತರ ಸಭಾ ಪ್ರಾಂತದ ಗೌರವ ಕಾರ್ಯದರ್ಶಿ ವಿಜಯಕುಮಾರ ದಂಡಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸತತ ಪರಿಶ್ರಮದ ಮೂಲಕ ಉನ್ನತ ಸ್ಥಾನ ಅಲಂಕರಿಸಲು ಪ್ರಯತ್ನಿಸಬೇಕು ಎಂದರು.
ನಿವೃತ್ತ ಶಿಕ್ಷಕ ವಿಲ್ಸನ್​ ಮೈಲಿ ಮಾತನಾಡಿ, ವಿದ್ಯಾರ್ಥಿಗಳು ದೇಶಭಕ್ತಿ, ರಾಷ್ಟ್ರೀಯ ಐಕ್ಯತೆ, ಭಾವೈಕ್ಯತೆ ಬೆಳೆಸಿಕೊಳ್ಳಬೇಕು. ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳೂ ಮುಖ್ಯ. ಹೀಗಾಗಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಹ ಪಾಲ್ಗೊಂಡು ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಕ್ರೀಸ್ಟೋಫರ್​ ಭಾಸ್ಕರ ಮಾತನಾಡಿ, ಪ್ರತಿ ಮಕ್ಕಳಲ್ಲಿ ವಿಶೇಷ ಗುಣ ಇರುತ್ತದೆ. ಆ ಕೌಶಲ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದರು.
ಎಸ್​.ಜೆ.ದಂಡಿನ, ಶಿಕ್ಷಕರು, ಇತರರು ಇದ್ದರು. ಸಂಜಯ ಗುಡಸಲಮನಿ ಸ್ವಾಗತಿಸಿದರು. ಜೆ.ಎಸ್​.ಹೂಲಗೇರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net