ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ

30 TKE 3(1)
Published on

ತರೀಕೆರೆ: ಶಿಸ್ತು ಸಂಯಮ ಶ್ರದ್ಧೆ ಮತ್ತು ಪರಿಶ್ರಮ ಎಂಬುದು ಗುರಿ ಸಾಧಿಸುವ ಸಾಧನಗಳು ಎಂದು ನಿವೃತ್ತ ಸಹ ಪ್ರಾಧ್ಯಾಪಕ ಪ್ರೋ.ಕೆ.ಆರ್.ವೀರೇಶ್ ಹೇಳಿದರು.

ಪಟ್ಟಣದ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕ್ರೀಡೆ, ಸಾಂಸ್ಕೃತಿಕ, ಎನ್‌ಎಸ್‌ಎಸ್, ಯೂತ್ ರೆಡ್‌ಕ್ರಾಸ್, ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಓದಿನ ಜತೆ ಕಲೆ, ಸಾಹಿತ್ಯ, ಕ್ರೀಡೆ ಹೀಗೆ ನಾನಾ ವಿಷಯಗಳು ಹಾಗೂ ಪುಸ್ತಕ ಜ್ಞಾನ ವೃದ್ಧಿಸುವ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಮೊಬೈಲ್ ಬಳಕೆ ಜೀವನಕ್ಕೆ ಮಾರಕವಾಗುತ್ತಿದ್ದು, ಎಚ್ಚರಿಕೆಯಿಂದ ಬಳಸಿ ಅದರಿಂದ ತಿಳಿದುಕೊಳ್ಳುವ ವಿಷಯಗಳ ಬಗ್ಗೆ ಮಾತ್ರ ಆಸಕ್ತಿವಹಿಸಬೇಕು ಎಂದರು.

ಪ್ರಾಚಾರ್ಯ ಡಾ.ಕೆ.ಜಿ.ಚವ್ಹಾಣ್ ಮಾತನಾಡಿ, ಬಸವತತ್ವದ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಾಲೇಜು ನಾಡಿಗೆ ಹೆಸರುವಾಸಿಯಾಗಿದೆ. ಇಲ್ಲಿ ಕಲಿತ ಬಹುತೇಕರು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದು, ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದ್ದಾರೆ. ಪ್ರಸ್ತುತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಲಿಕೆ ಜತೆ ಕ್ರೀಡೆ ಚಟುವಟಿಕೆಯಲ್ಲಿ ಸಕ್ರಿಯರಾಗುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಐಕ್ಯೂಎಸಿ ಸಂಚಾಲಕ ಡಾ.ಸದಾಶಿವಯ್ಯ, ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ಆರ್.ವರುಣನಾಯ್ಕ ಸೇರಿ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net