

ಕಾರಟಗಿ: ಕ್ರೀಡೆಗಳು ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಮಾತ್ರವಲ್ಲದೇ ಶಿಕ್ಷಣದ ಒಂದು ಭಾಗವೂ ಆಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಬಿ.ನಟೇಶ್ ಹೇಳಿದರು.
ಇದನ್ನೂ ಓದಿ:ಕ್ರೀಡಾಕೂಟ ವಯೋಮಿತಿ ಸಂದಿಗ್ಧ
ಪಟ್ಟಣದ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು. ಕ್ರೀಡೆಗಳನ್ನೂ ಶಿಕ್ಷಣದ ಭಾಗವಾಗಿ ಸ್ವೀಕರಿಸಿ ಯಶಸ್ವಿಯಾಗಬಹುದು. ಶಿಸ್ತು ಹಾಗೂ ಬದ್ಧತೆಯಿಂದ ಕಲಿಕೆಯಲ್ಲಿ ತೊಡಗಿದರೆ ಎಲ್ಲ ರಂಗದಲ್ಲಿ ಮುಂದುವರಿಯಲು ಸಾಧ್ಯ ಎಂದರು. 25 ಪ್ರೌಢಶಾಲೆಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೀಕಾರ್, ಶಿಕ್ಷಣ ಸಂಯೋಜಕ ರಾಘವೇಂದ್ರ, ತಾಲೂಕು ದೈಹಿಕ ಪರಿವೀಕ್ಷಕ ಎಸ್.ಎನ್.ಸರಸ್ವತಿ, ಕೇಂಬ್ರಿಡ್ಜ್ ಶಾಲೆ ಸಂಸ್ಥಾಪಕ ಅಧ್ಯಕ್ಷೆ ಲೀಲಾ ಮಲ್ಲಿಕಾರ್ಜುನ, ಕಾರ್ಯದರ್ಶಿ ಮಲ್ಲಿಕಾರ್ಜುನ್ ಬಿಚಗಲ್, ಮುಖ್ಯಶಿಕ್ಷಕ ವಿ.ಟಿ.ಹನುಮಂತಪ್ಪ ಇತರರಿದ್ದರು.