

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಸೀವಿಂಗ್ ಟೆಕ್ನಾಲಜಿ ವಿದ್ಯಾರ್ಥಿನಿಯರಿಗೆ ಮಷಿನ್ ಎಂಬ್ರಾಯ್ಡರಿ ಕುರಿತ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.
ವೇಣೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಶೇಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, 150ಕ್ಕೂ ಹೆಚ್ಚು ಎಂಬ್ರಾಯ್ಡರಿ ವಿನ್ಯಾಸಗಳ ಬಗ್ಗೆ ತಿಳಿಸಿದರು. ಹ್ಯಾಂಡ್ ಎಂಬ್ರಾಯ್ಡರಿ ಮತ್ತು ಮಷಿನ್ ಎಂಬ್ರಾಯ್ಡರಿ ನಡುವಿನ ವ್ಯತ್ಯಾಸ ತಿಳಿಸಿದರು.
ವಿದ್ಯಾರ್ಥಿನಿಯರು ಎಂಬ್ರಾಯ್ಡರಿ ಯಂತ್ರವನ್ನು ಬಳಸುವ ಅನುಭವ ಪಡೆದರು. ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಾಂಶುಪಾಲ ವಿ.ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.