ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ

mohan reddy
Published on

ಶಿವಮೊಗ್ಗ: ಅಂಬೇಡ್ಕರ್ ಭವನದಲ್ಲಿ ಜೂ. 27ರ ಸಂಜೆ 5.30ಕ್ಕೆ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ದಿಕ್ಸೂಚಿ ಭಾಷಣ ಮಾಡುವರು ಎಂದು ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಕಳೆದಿದ್ದು, ಇದು ವಿಕಸಿತ ಭಾರತದ ಅಮೃತಕಾಲವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ಈಗಾಗಲೇ ಆಯೋಜಿಸಿದೆ. ಇದರ ಭಾಗವಾಗಿ ಜೂ. 27ರ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತುರ್ತು ಪರಿಸ್ಥಿತಿ ಕರಾಳ ದಿನಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತರು ಜೂ.25ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಜೂ.26ರಂದು ಬಿಜೆಪಿ ಕಚೇರಿಯಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net