ಜೂ.25ರಂದು "ತುರ್ತು ಪರಿಸ್ಥಿತಿ " ಸಂವಾದ ಕಾರ್ಯಕ್ರಮ

Aapatkaal
Published on



ಮಂಗಳೂರು : ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟಿಸ್ ಸಂಘಟನೆಯ ವತಿಯಿಂದ ಜೂ.25ರಂದು ಮಧ್ಯಾಹ್ನ 3.30ಕ್ಕೆ ನಗರದ ನವಭಾರತ ಸರ್ಕಲ್ ಬಳಿಯ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ‘ತುರ್ತು ಪರಿಸ್ಥಿತಿ ಸಂವಿಧಾನಕ್ಕೆ ಮಾಡಿದ ಅಪಚಾರ ’ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಮಾಜಿ ಸಂಸದ ಪ್ರತಾಪಸಿಂಹ, ಮಾಜಿ ಸಚಿವ
ಕುಮಾರ ಬಂಗಾರಪ್ಪ, ಸಕಲೇಶಪುರದ ಶಾಸಕ ಸಿಮೆಂಟ್ ಮಂಜು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕರ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಚಾಲಕ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net