ಉದಯೋನ್ಮುಖ ಪ್ರತಿಭೆ ಪ್ರಶಸ್ತಿ

9-RNR-04A
Published on

ರಾಣೆಬೆನ್ನೂರ: ಬೆಂಗಳೂರಿನ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ, ಸುವರ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ನೆಹರು ಯುವ ಕೇಂದ್ರದ ವತಿಯಿಂದ ಇಲ್ಲಿಯ ಪಂಪಾನಗರ ಡಾ. ನಾಗರಾಜ ಚಳಗೇರಿ ಅವರಿಗೆ ‘ಭಾರತೀಯ ಉದಯೋನ್ಮುಖ ಪ್ರತಿಭೆ’ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಾ. ನಾಗರಾಜ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಾಗೂ ರೈತರಿಗೆ ಕೃಷಿ ಬಗ್ಗೆ ಉಚಿತವಾಗಿ ಮಾಹಿತಿ ನೀಡಿ ಸಮಾಜ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಪ್ರಮುಖರಾದ ಮೀಟಾ ನಾಯ್ಕ, ಸಂತೋಷ ಕೃಷ್ಣನಾಯ್ಕ ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net