ಶಶಿಕಿರಣ್ ಶೆಟ್ಟಿ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ‘ ಪ್ರಶಸ್ತಿ

mng-shashikanth shetty
Published on


 
 ಮಂಗಳೂರು : ಆರ್ಥಿಕವಾಗಿ ಹಿಂದುಳಿದವರ ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ನಿರ್ಮಾಣಕ್ಕೆ ನೆರವು ನೀಡುವುದರಿಂದ ಸಮಾಜದ ಅಭ್ಯುದಯ ಸಾಧ್ಯ ಎಂದು ಮುಂಬೈಯ ಉದ್ಯಮಿ, ಆಲ್‌ಕಾರ್ಗೊ ಸಮೂಹ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿದರು.
 ಜಾಗತಿಕ ಬಂಟ ಪ್ರತಿಷ್ಠಾನದ ವತಿಯಿಂದ  ನಗರದ ಎ.ಜೆ.ಗ್ರಾೃಂಡ್ ಹೋಟೆಲ್‌ನಲ್ಲಿ ನಡೆದ ಸಾಧಕರಿಗೆ ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಲ್‌ಕಾರ್ಗೊ ಸಮೂಹ ಸಂಸ್ಥೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ೧೭ ಕುಟುಂಬಗಳಿಗೆ ದಾನದ ರೂಪದಲ್ಲಿ ನೀಡಿದ ಮನೆಗಳ ಕೀಲಿ ಕೈ ಹಸ್ತಾಂತರಿಸಿ ಅವರ ಮಾತನಾಡಿದರು.
 ಇದೇ ಸಂದರ್ಭ ಜಾಗತಿಕ ಬಂಟ ಪ್ರತಿಷ್ಠಾನದ ವತಿಯಿಂದ  ಶಶಿಕಿರಣ್ ಶೆಟ್ಟಿ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಕ್ಷಗಾನ ರಂಗದಲ್ಲಿ ೫೦ ವರ್ಷ ಮಿಕ್ಕಿ ಸೇವೆ ಸಲ್ಲಿಸಿದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಡಾ.ಡಿ.ಕೆ.ಚೌ ಟ ದತ್ತಿನಿಧಿಯಿಂದ ೨೫ ಸಾವಿರ ರೂ. ನಗದು, ಫಲಕ ನೀಡಿ ಸನ್ಮಾನಿಸಲಾಯಿತು.
  ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ, ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಪೃಥ್ವಿರಾಜ್ ರೈ, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ಸಿಎಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ಮಂದಾರ.ಪಿ.ಶೆಟ್ಟಿ, ಮತ್ತು ದರ್ಶನ್ ಶೆಟ್ಟಿ ಇವರುಗಳನ್ನು ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.
 ಜಾಗತಿಕ ಬಂಟ ಪ್ರತಿಷ್ಠಾನದ ಪೋಷಕ ಡಾ.ಬಿ.ಆರ್.ಶೆಟ್ಟಿ, ಮಾಜಿ ಅಧ್ಯಕ್ಷ ಡಾ.ಎಂ.ಶಾಂತರಾಮ ಶೆಟ್ಟಿ,ಉಪಾಧ್ಯಕ್ಷರಾದ ಕುಶಲ್.ಎಸ್.ಹೆಗ್ಡೆ, ಕೆ.ಸಚ್ಚಿದಾನಂದ ಹೆಗ್ಡೆ, ಯೋಜನಾ ನಿರ್ದೇಶಕ ಡಾ.ಬಿ.ಸಂಜೀವ ರೈ , ಖಜಾಂಜಿ ಸಿಎ ಪಿ.ರಘುಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net