ಯಶಸ್ಸಿನತ್ತ ದಾಪುಗಾಲಿಡಲು ಭಾವಾಂತರಂಗ

bhavantaranga
ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಭಾವಾಂತರಂಗ-ಪರಿಪೂರ್ಣ ಬದುಕಿನೆಡೆ ನಮ್ಮ ಪಯಣ ಎನ್ನುವ ಸಂಪೂರ್ಣ ಚಟುವಟಿಕೆ ಆಧಾರಿತ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.
Published on

ಕುಂದಾಪುರ: ಭಾವಾಂತರಂಗ ವಿದ್ಯಾರ್ಥಿಗಳು ಯಶಸ್ಸಿನತ್ತ ದಾಪುಗಾಲು ಇಡುವಂತೆ ಪ್ರೇರೇಪಿಸುತ್ತದೆ. ವಿದ್ಯಾಸಂಸ್ಥೆ ಪಠ್ಯಪುಸ್ತಕ ಶಿಕ್ಷಣಕ್ಕೆ ಸೀಮಿತವಾಗಿರದೆ, ಕ್ರಿಯಾಶೀಲತೆ ಮೂಡಿಸುವ, ಚಿಂತನಾಶೀಲತೆ ಉದ್ದೀಪನಗೊಳಿಸುವ ಕಾರ್ಯಕ್ರಮ ಆಯೋಜಿಸುತ್ತಿರಬೇಕು. ನಾಡಿನ ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿ ಸಾರ ವಿದ್ಯಾರ್ಥಿ ಸಮೂಹಕ್ಕೆ ತಲುಪಿಸುವ ಕಾರ್ಯವಾಗಬೇಕು ಎಂದು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಮತ್ತು ಪ್ರಾಂಶುಪಾಲ ಶರಣ ಕುಮಾರ ಹೇಳಿದರು.

ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಭಾವಾಂತರಂಗ-ಪರಿಪೂರ್ಣ ಬದುಕಿನೆಡೆ ನಮ್ಮ ಪಯಣ ಎನ್ನುವ ಸಂಪೂರ್ಣ ಚಟುವಟಿಕೆ ಆಧಾರಿತ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಶುಕ್ರವಾರ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳು ಜೇನುಗೂಡಿಗೆ ಕಲಾತ್ಮಕ ಜೇನುಹುಳುಗಳನ್ನು ಪೋಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

46 ವಿವಿಧ ಬಗೆಯ ಕಾರ್ಯಾಗಾರಗಳನ್ನು 49 ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನಡೆಸಲಾಯಿತು. ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಸದಾರಾಮ್, ಶಿಕ್ಷಕ ಹಾಗೂ ಶಿಕ್ಷಕೇತರರು ಉಪಸ್ಥಿತರಿದ್ದರು.

ಸಹಶಿಕ್ಷಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಶಾಲಾ ಸಂಯೋಜಕಿ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net