ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ

FotoJet 11111
Published on

ಇಹಲೋಕ ತ್ಯಜಿಸಿದ ದೇವಿದಾಸ ಸುಬ್ರಾಯ ಶೇಟ್

 ಸೂಲಿಬೆಲೆ: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ ಸುಬ್ರಾಯ ಶೇಟ್ (82) ಭಾನುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಸ್ವಗೃಹ ಸೂಲಿಬೆಲೆ ಶಾರದಾ ಮಂದಿರದಲ್ಲಿ ಕೊನೆಯುಸಿರೆಳೆದರು.

ಇತ್ತೀಚೆಗೆ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬ್ರಾಹ್ಮಣ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಮೂಲತಃ ಹೊನ್ನಾವರದವರಾದ ದೇವಿದಾಸ ಸುಬ್ರಾಯ ಶೇಟ್ ಇಲ್ಲಿನ ವಿವೇಕಾನಂದ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಜೀವನ ಪ್ರಾರಂಭಿಸಿ ಇಲ್ಲಿಯೇ ನೆಲೆ ಕಂಡುಕೊಂಡಿದ್ದರು. ನಿವೃತ್ತಿ ನಂತರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುಮಾರು 8 ವರ್ಷ ಮುಖ್ಯ ಶಿಕ್ಷಕರಾಗಿದ್ದರು.

ಹಾಗೆಯೇ ಸಾಮಾಜಿಕ ಕಾರ್ಯಗಳಲ್ಲಿ ತೊಡಸಿಕೊಂಡು ಸೂಲಿಬೆಲೆಯ ಜೇನುಗೂಡು ರೂರಲ್ ಡೆವಲ್ಪಮೆಂಟ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ನಿರ್ದೇಶಕರಾಗಿದ್ದರು. ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಂಡಿದ್ದರು.

ಗಣ್ಯರಿಂದ ಅಂತಿಮ ನಮನ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜೇಯಂದ್ರ, ಶಾಸಕ ಶರತ್‌ಬಚ್ಚೇಗೌಡ, ಬಮುಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಯುವ ಮುಖಂಡ ಜಿ.ನಾರಾಯಣಗೌಡ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರಗೌಡ, ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಜಿಪಂ ಮಾಜಿ ಅಧ್ಯಕ್ಷ ವಿ.ಪ್ರಸಾಧ್, ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ರಂಗನಾಥ್, ಗ್ರಾಪಂ ಅಧ್ಯಕ್ಷ ಜನಾರ್ದನರೆಡ್ಡಿ, ಕುಡಚಿ ಮಾಜಿ ಶಾಸಕ ಪಿ.ರಾಜೀವ್, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ, ಸಂಘಟನಾ ಕಾರ್ಯದರ್ಶಿ ಎಸ್.ಕೆ.ವಸಂತಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ವಹ್ನಿಕುಲ ತಿಗಳ ಸಂಘದ ಅಧ್ಯಕ್ಷ ಸಿ.ಜಯರಾಜ್ ಸೇರಿ ಅಪಾರ ಸಂಖ್ಯೆಯ ಹಳೆಯ ವಿದ್ಯಾರ್ಥಿಗಳು, ಅಭಿಮಾನಿ ವರ್ಗ ಅಂತಿಮ ದರ್ಶನ ಪಡೆಯಿತು. ಸೂಲಿಬೆಲೆ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

ಸುಮಾರು 33 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ದೇವಿದಾಸ ಸುಬ್ರಾಯ ಶೇಟ್ ಅವರ ಸೇವೆ ಅನನ್ಯ ಇಂತಹ ಸಾಮಾಜಿಕ ಕಾಳಜಿಯ ವ್ಯಕ್ತಿಯನ್ನು ಸಮಾಜ ಕಳೆದುಕೊಂಡಿರುವುದು ಶೈಕ್ಷಣಿಕ ಕ್ಷೇತ್ರಕ್ಕೆ ನಷ್ಟವಾಗಿದೆ. ಬಿ.ವೈ.ವಿಜೇಯಂದ್ರ, ರಾಜ್ಯಾಧ್ಯಕ್ಷ, ಬಿಜೆಪಿಸುಮಾರು 80ರ ವಯೋಮಾನದಲ್ಲೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ದೇವಿದಾಸ ಸುಬ್ರಾಯ ಶೇಟ್ ನಿಧನ ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಶರತ್ ಬಚ್ಚೇಗೌಡ, ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net