ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಶಿಕ್ಷಣಕ್ಕೆ ಒತ್ತು

education minister madhu bangarappa
ಶಿಕ್ಷಣ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಈ ಬಾರಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪ್ರಸಕ್ತ ವರ್ಷ ಜಿಲ್ಲಾವಾರು ಟಾಪರ್‌ಗಳ ಅಭಿಪ್ರಾಯ ಸಂಗ್ರಹಿಸಿ ಯೂಟ್ಯೂಬ್ ಮೂಲಕ ಮಕ್ಕಳಿಗೆ ಕಲಿಕಾ ಸೌಲಭ್ಯ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಳೆದ ಬಾರಿಗಿಂತ ಶೇ.8ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಎಲ್ಲ ಶಿಕ್ಷಕರು ಉತ್ತಮ ರೀತಿಯಲ್ಲಿ ಪಾಠ ಮಾಡಿದ್ದಾರೆ. ಕಳೆದ ಡಿಸೆಂಬರ್ ವೇಳೆಗೆ ಎಲ್ಲ ಪಾಠಗಳನ್ನು ಪೂರ್ಣಗೊಳಿಸಿ ಕಲಿಕೆಗೆ ಒತ್ತು ನೀಡಲಾಗಿತ್ತು. ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆಗೂ ಮೀರಿ ಬಂದಿದೆ ಎಂದರು.

ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕವಿಲ್ಲದೆ ಎರಡು ಮತ್ತು ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ. ಸೋಮವಾರ ಬೆಳಗ್ಗೆವರೆಗೆ 64 ಸಾವಿರ ವಿದ್ಯಾರ್ಥಿಗಳು ಮರುಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇನ್ನೂ ಕಾಲಾವಕಾಶವಿದೆ ಎಂದು ತಿಳಿಸಿದರು.

ವಿಶೇಷವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಯೋಗದಲ್ಲಿ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಸ್ಕಾೃನ್ ಪ್ರತಿ, ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಆ್ಯಂಡ್ರಾಯ್ಡಾ ಮೊಬೈಲ್‌ನ ಪ್ಲೇಸ್ಟೋರ್ ಮೂಲಕ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net