ಸರ್ಕಾರಿ ಶಾಲೆಗಳ ಉತ್ತಮ ಫಲಿತಾಂಶಕ್ಕೆ ಒತ್ತು

30sgr5
ಸಾಗರದÀಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿAದ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಭೋಜೇಗೌಡ, ಲಕ್ಷ÷್ಮಣ್, ಸಿದ್ದಬಸಪ್ಪ, ಧರ್ಮಪ್ಪ, ಪರಮೇಶ್ವರಪ್ಪ ಇತರರಿದ್ದರು.
Published on

ಸಾಗರ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ತರಲು ಶಿಕ್ಷಕರಿಗೆ ಉತ್ತೇಜನ ನೀಡುವುದಕ್ಕಾಗಿ ವಿಶೇಷ ಯೋಜನೆಗಳನ್ನು ರೂಪಿಸಿದೆ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಬುಧವಾರ ನಗರದ ಭದ್ರಕಾಳಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿAದ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಬದಲಾದ ದಿನಗಳಲ್ಲಿ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸವಾಲೊಡ್ಡಿ ಗಮನಾರ್ಹ ಸಾಧನೆ ಮಾಡುತ್ತಿವೆ. ಅಂತಹ ಸರ್ಕಾರಿ ಶಾಲೆಗಳನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿ. ಈ ಬಗ್ಗೆ ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಮೆರಿಟ್ ಮೇಲೆ ಆಯ್ಕೆಯಾಗಿ ಬಂದ ಶಿಕ್ಷಕರು ಇರುತ್ತಾರೆ. ಸಾಗರದಲ್ಲಿ ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡುತ್ತಿದ್ದು,ಕೆಲಸ ಮಾಡದ ಶೇ.1 ಶಿಕ್ಷಕರಿಂದ ಶೇ.99 ಶಿಕ್ಷಕ ಸಮೂಹ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ಬಹಳ ಮುಖ್ಯ. ಪಾಲಕರು ಮಕ್ಕಳ ಮೇಲೆ ನಂಬಿಕೆ ಇಟ್ಟು ಶಾಲೆಗೆ ಕಳುಹಿಸುತ್ತಾರೆ. ಅವರ ನಂಬಿಕೆ ಉಳಿಯುವುದು ಮಕ್ಕಳು ಉತ್ತಮ ಫಲಿತಾಂಶ ಪಡೆದುಕೊಂಡಾಗ ಮಾತ್ರ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಸಂಘದ ಅಧ್ಯಕ್ಷ ಲಕ್ಷ÷್ಮಣ್ ಆರ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷ ಬಿ.ಸಿದ್ದಬಸಪ್ಪ, ತಾಲೂಕು ಅಧ್ಯಕ್ಷ ಎಂ.ವೈ. ಧರ್ಮಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ, ಪ್ರಮುಖರಾದ ಕೆ.ಆರ್.ಬಿಂಬ, ಡಾ. ಅನ್ನಪೂರ್ಣ, ಪರುಶುರಾಮಪ್ಪ, ಪ್ರೇಮಕುಮಾರಿ, ಜಿ.ಮಹಾಬಲೇಶ್ವರ, ಸುಬ್ರಹ್ಮಣಿ, ನಾಗರಾಜ, ಸುಷ್ಮಾ, ಎಚ್.ಉಮೇಶ್, ಡಾ.ನಾಗೇಶ್ ಬಿದರಗೋಡು, ಜಿ.ಆರ್.ವೀರಭದ್ರಪ್ಪ, ಎಚ್.ಬಿ.ಗಣಪತಿ, ಕೆ.ವಿ.ಮಹೇಶ್ ಇತರರಿದ್ದರು.

ರಾಜ್ಯದಲ್ಲಿ ಶಿಕ್ಷಕರ ಕೊರತೆ ನಡುವೆಯೂ ಉತ್ತಮ ಶಿಕ್ಷಣವನ್ನು ನಮ್ಮ ಶಿಕ್ಷಕರು ನೀಡುತ್ತಿದ್ದಾರೆ. ರಾಜ್ಯದಲ್ಲಿ ೧೩,೫೦೦ ಶಿಕ್ಷಕರನ್ನು ನೇಮಕ ಪ್ರಕ್ರಿಯೆ ವಿಳಂಬವಾಗುತ್ತಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ಅದು ಶೀಘ್ರದಲ್ಲೇ ಬಗೆಹರಿಯಲಿದೆ.| ಗೋಪಾಲಕೃಷ್ಣ ಬೇಳೂರುಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net